ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ

8..npk--1
Published on

ನಾಪೋಕ್ಲು: ನಾಪೋಕ್ಲು ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ದಿಢೀರ್ ಮಳೆಯಾಗಿದೆ.
ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಮಳೆ ಆರಂಭಗೊಂಡಿತು. ಪಟ್ಟಣ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾಫಿ ಕೊಯ್ಲು ಆರಂಭಗೊಂಡಿದ್ದು, ಮಳೆಯಿಂದಾಗಿ ರೈತರು ಆತಂಕಕ್ಕೊಳಗಾದರು.
ವಿವಿಧೆಡೆ ಅರೇಬಿಕ ಕಾಫಿ ಬೆಳೆಯನ್ನು ಕೊಯ್ಲು ಮಾಡಲಾಗಿದ್ದು ಕಣದಲ್ಲಿ ಹರಡಲಾಗಿತ್ತು. ಬಿಸಿಲಿನ ತಾಪವೂ ಇಲ್ಲದೆ ಕಾಫಿಯನ್ನು ಒಣಗಿಸುವುದು ಕಷ್ಟಕರವಾಗಿದ್ದ ಸಂದರ್ಭದಲ್ಲಿ ಮಳೆ ಸುರಿದಿರುವುದರಿಂದ ರೈತರು ಆತಂಕ ಪಡುವಂತಾಗಿದೆ.
ಭತ್ತದ ಕೃಷಿ ಕೈಗೊಳ್ಳುವವರ ಸಂಖ್ಯೆ ದಿನದ ದಿನಕ್ಕೆ ಇಳಿಮುಖಗೊಳ್ಳುತ್ತಿದ್ದು, ಕೆಲವು ರೈತರು ಅಲ್ಲಲ್ಲಿ ಭತ್ತದ ಕೃಷಿಯಲ್ಲಿ ತೊಡಗಿದ್ದಾರೆ. ಮಳೆಯಿಂದ ಭತ್ತದ ಇಳುವರಿಗೆ ಹಾನಿಯಾಗಿದೆ. ಅಲ್ಲಲ್ಲಿ ಕೊಯ್ಲು ಮಾಡಲಾಗಿದ್ದು, ಮಳೆಯಿಂದಾಗಿ ಭತ್ತದ ಪೈರುಗಳು ನೆನೆದು ಹೋಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net