ಮುನಿಯಾಲು ಕಾಲೇಜು ಪ್ರಾಂಶುಪಾಲರಾಗಿ ಸುಧಾಕರ್ ನೇಮಕ

sudhakar
ಸುಧಾಕರ್ ಕೆ.ಜಿ.
Published on

ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲರಾಗಿ ಪ್ರೊ.ಸುಧಾಕರ್ ಕೆ.ಜಿ. ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಹೆಬ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಲವು ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ ತೀರ್ಥಹಳ್ಳಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದರು. ಇದೀಗ ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net