ಸುಧೀಂದ್ರ ತೀರ್ಥ ಸ್ವಾಮೀಜಿ ಪುಣ್ಯತಿಥಿ ಆರಾಧನೆ

swamiji
Published on

ಗಂಗೊಳ್ಳಿ: ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ 9ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ಮಂಗಳವಾರ ನಡೆಯಿತು.

ಬೆಳಗ್ಗೆ ಸ್ತೋತ್ರ ಪಠಣ, ಮಧ್ಯಾಹ್ನ ದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಪುಷ್ಪಾರ್ಚನೆ, ತೀರ್ಥ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ ಮತ್ತು ಆಡಳಿತ ಮಂಡಳಿ ಡಾ.ಕಾಶೀನಾಥ ಪೈ ಮತ್ತು ಎಂ.ಜಿ.ಪ್ರಕಾಶ ಪೈ ಶ್ರೀಗಳ ಗುಣಗಾನ ಮಾಡಿದರು. ರಾತ್ರಿ ಭಜನೆ, ದೇವರಿಗೆ ಪ್ರಸನ್ನಪೂಜೆ, ಪ್ರಸಾದ ವಿತರಣೆ ನಡೆಯಿತು. ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನ ನೆರವೇರಿತು. ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net