

ಕುಂದಾಪುರ: ಹರಿದ್ವಾರದ ಶ್ರೀ ವ್ಯಾಸಾಶ್ರಮದಲ್ಲಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನದಲ್ಲಿ ಡಿ.25ರಿಂದ 29ರವರೆಗೆ ನಡೆಯಲಿರುವ ಶ್ರೀ ಕಾಶೀ ಮಠದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪುಣ್ಯತಿಥಿ ಆರಾಧನಾ ದಶಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಜರುಗಿದ ಧರ್ಮಸಭೆಯಲ್ಲಿ ಬಿಡುಗಡೆಗೊಳಿಸಿದರು.
ಕೋಟಿ ಗಾಯತ್ರಿ ಹವನ, ಲಘು ವಿಷ್ಣು ಅಭಿಷೇಕ, ಮಹಾ ವಿಷ್ಣು ಅಭಿಷೇಕ, ಪವಮಾನ ಅಭಿಷೇಕ, ಸೀಯಾಳಾಭಿಷೇಕ, ಕ್ಷೀರಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಮಿತಿಯ ಕೋಶಾಧಿಕಾರಿ ಮಂಗಳೂರಿನ ಸಿಎ ಜಗನ್ನಾಥ್ ಕಾಮತ್ ತಿಳಿಸಿದ್ದಾರೆ.