ಸುದಿನ ಕೋಡಿಗೆ ಸಮಗ್ರ ಮತ್ಸೃ ಕೃಷಿ ಪ್ರಶಸ್ತಿ

sanmana
ಕೃಷಿ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಸುದಿನ ಕೋಡಿ ಅವರಿಗೆ ಸಮಗ್ರ ಮತ್ಸೃ ಕೃಷಿ ಪ್ರಶಸ್ತಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರದಾನ ಮಾಡಿದರು.
Published on

ಕೋಟ: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 19ನೇ ಕಂತು ಬಿಡುಗಡೆ ಸಮಾರಂಭ ಮತ್ತು ರೈತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮೌಲ್ಯವರ್ಧನೆ ಮತ್ತು ಮೀನುಗಾರಿಕೆ ಕ್ಷೇತ್ರದಲ್ಲಿ ಪ್ರಗತಿಪರ ಕೃಷಿಕರಾಗಿ ಸಾಧನೆಗೈದ ಸುದಿನ ಕೋಡಿ ಅವರಿಗೆ ಸಮಗ್ರ ಮತ್ಸೃ ಕೃಷಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸೋಮವಾರ ನಡೆದ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಧನಂಜಯ್, ಪೂಜಾ ನಾಯಕ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಪೂರ್ಣಿಮಾ ಜಿ.ಸಿ., ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ನಾಯ್ಕ, ಉಪ ನಿರ್ದೇಶಕ ಡಾ.ಸದಾನಂದ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net