ಸಿಡಿದ ಸುಡುಮದ್ದು ಘಟಕ : ಇಬ್ಬರು ಮಹಿಳೆಯರಿಗೆ ಗಾಯ

spota
Published on

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ನಡೆದಿದೆ.

ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ.

ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದಾರೆ ಕಟ್ಟಡದ ಮೇಲ್ಚಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net