ದಾಂಪತ್ಯ ಕಲಹದಿಂದ ನೊಂದ ಪತಿ ಆತ್ಮಹತ್ಯೆ

poison
Published on

ಬ್ಯಾಡಗಿ: ದಾಂಪತ್ಯ ಕಲಹದಿಂದ ನೊಂದು ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಮೋಹನರಾಜ ಆನ್ವೇರಿ (33) ಆತ್ಮಹತ್ಯೆ ಮಾಡಿಕೊಂಡವ. ಪತಿ-ಪತ್ನಿಯರ ನಡುವೆ ಕೌಟುಂಬಿಕ ಕಲಹ ಉಂಟಾದ ಪರಿಣಾಮ ಇಬ್ಬರೂ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ನೊಂದಿದ್ದ ಮೋಹನರಾಜ ಆ. 21ರಂದು ಮನೆಯಲ್ಲಿ ವಿಷ ಸೇವಿಸಿದ್ದ. ತಕ್ಷಣ ಆತನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಮೂರು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net