ಸಕ್ಕರೆ ಕಾಯಿಲೆಯಿಂದ ಬೇಸತ್ತು ಆತ್ಮಹತ್ಯೆ

Crime Logo
Published on

ಹಿರೇಕೆರೂರ: ಸಕ್ಕರೆ ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬೇಸತ್ತು ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಟಕೇರೂರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಉಜ್ಜಪ್ಪ ನಾಗಪ್ಪ ದೊಡ್ಡಮನಿ (75) ಮೃತ ವೃದ್ಧರು.

ಇವರು ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಂಸಬಾವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net