

ಬೆಳಗಾವಿ: ಹುಣಶ್ಯಾಳ ಪಿ.ಜಿ.ಸತೀಶ ಶುಗರ್ಸ್‌ಗೆ 2024-25ನೇ ಹಂಗಾಮಿನಲ್ಲಿ ಕಬ್ಬು ಹಾಗೂ ಕಬ್ಬಿನ ಬೀಜ ಪೂರೈಸಿದ ಎಲ್ಲ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಗ್ರಾಂ (ಅರ್ಧ ಕೆಜಿ) ಸಕ್ಕರೆಯನ್ನು ಪ್ರತಿ ಕೆಜಿಗೆ 20 ರೂ. ರಿಯಾಯಿತಿ ದರದಲ್ಲಿ ವಿತರಿಸುವ ಕುರಿತು ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿ ನಿರ್ಧರಿಸಲಾಗಿದೆ. ಕಬ್ಬು ಮತ್ತು ಕಬ್ಬಿನ ಬೀಜ ಪೂರೈಸಿದ ರೈತರಿಗೆ ಪ್ರತಿವರ್ಷದಂತೆ ಈ ವರ್ಷವೂ ಜು. 7ರಿಂದ ಕಾರ್ಖಾನೆ ಆವರಣದಲ್ಲಿ ಸಕ್ಕರೆ ವಿತರಿಸಲಾಗುವುದು. ಕಬ್ಬು ಪೂರೈಸಿದ ಎಲ್ಲ ರೈತರು ಸಕ್ಕರೆ ವಿತರಣಾ ಕೇಂದ್ರದಲ್ಲಿ ಕಬ್ಬಿನ ತೂಕದ ಪಾವತಿ, ಗುರುತಿನ ಚೀಟಿ ಹಾಗೂ ಪ್ರತಿನಿಧಿಯಾಗಿದ್ದಲ್ಲಿ ಸಂಬಂಧಪಟ್ಟ ವಲಯ ಕಚೇರಿಗಳಿಂದ ಅನುಮೋದಿಸಲ್ಪಟ್ಟ ಸಮ್ಮತಿ ಪತ್ರಗಳನ್ನು ಕಡ್ಡಾಯವಾಗಿ ಕಚೇರಿ ವೇಳೆಯಲ್ಲಿ ಹಾಜರುಪಡಿಸಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.