ಜಿಲ್ಲಾಧಿಕಾರಿ ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ನೌಕರ

suicide
Published on

ಬೆಳಗಾವಿ: ಸಕ್ಕರೆ ಕಾರ್ಖಾನೆಯ ನೌಕರನೊಬ್ಬ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಭವಿಸಿದೆ.

ಕೇರಳದ ಮೂಲದ ವಾಮದೇವ ಆತ್ಮಹತ್ಯೆಗೆ ಯತ್ನಿಸಿದವ. ಈತ ರಾಯಬಾಗದ ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾನೆ.

ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ನನಗೆ ಆರು ತಿಂಗಳಿಂದ ವೇತನ ನೀಡಿಲ್ಲ. ಜೀವನ ನಡೆಸುವುದೇ ದುಸ್ತರವಾಗಿದೆ. ಕಾರ್ಖಾನೆಯವರು ಅನ್ಯಾಯ ಮಾಡುತ್ತಿದ್ದಾರೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ನ್ಯಾಯ ಕೊಡಿಸಲಿಲ್ಲ ಎಂಬುದು ವಾಮದೇವನ ಆರೋಪ.

ವೇತನ ಸಿಗದೆ ಕಂಗಾಲಾಗಿದ್ದ ವಾಮದೇವ ಜಿಗುಪ್ಸೆಗೊಂಡು ಬೆಳಗಾವಿ ಡಿಸಿ ಕಚೇರಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ. ಅಷ್ಟರಲ್ಲಿ ಸ್ಥಳಕ್ಕೆ ತೆರಳಿದ ಮಾರ್ಕೆಟ್ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net