

ಬ್ರಹ್ಮಾವರ: ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ 2023 -24ನೇ ಸಾಲಿನ ವಾರ್ಷಿಕ ಮಹಾಸಭೆ ಬ್ರಹ್ಮಾವರದ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಈ ಸಂದರ್ಭ ರೈತರ ತಂಡವೊಂದು ಕಾರ್ಖಾನೆಯ 110 ಎಕರೆ ಭೂಮಿಯನ್ನು ಸರ್ಕಾರ ಬೇರೆ ಇಲಾಖೆಗೆ ಪರಭಾರೆ ಮಾಡಬಾರದು. ರೈತರ ಆಸ್ತಿಯಾದ ಜಾಗವನ್ನು ಕಾರ್ಖಾನೆ ಮರು ನಿರ್ಮಾಣ ಅಥವಾ ರೈತರಿಗೆ ಅನುಕೂಲವಾಗುವಂತ ಯೋಜನೆಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ, ರೈತರ ಹಿತಾಸಕ್ತಿಗೆ ಪೂರಕವಾಗುವ ಯೋಜನೆಯನ್ನು ಸರ್ಕಾರಕ್ಕೆ ಶಿಪಾರಸು ಮಾಡುತ್ತೇನೆ ಎಂದು ಭರವಸೆ ನೀಡಿದರು. ಪ್ರಭಾರ ವ್ಯವಸ್ಥಾಪಕ ನಿರ್ದೇಶಕಿ ಲಾವಣ್ಯ ಕೆ.ಆರ್ ಉಪಸ್ಥಿತರಿದ್ದರು. ಗೋಪಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.