ಮಂಡ್ಯದ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಕತ್ತು ಕೊಯ್ದು ಬರ್ಬರ ಹತ್ಯೆ

rape
Published on

ಮಂಡ್ಯ: ಕಬ್ಬು ಕಟಾವಿಗೆಂದು ಬಂದಿದ್ದ ಬಾಲಕಿಯನ್ನು ಹೊತ್ತೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.

ಮದ್ದೂರಿನ ಹುರುಗಲ ವಾಡಿ ಗ್ರಾಮದ ರೈತ ಚೆಲುವರಾಜ್ ಅವರ ಕಬ್ಬಿನ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮೂಲದ ಬಾಲಕಿ ಆರತಿ (12) ಗದ್ದೆಯಲ್ಲಿ ಕಬ್ಬು ಕಟಾವು ಮಾಡುವುದಕ್ಕೆ ಬಂದಿದ್ದಳು. ಈ ವೇಳೆ ಆಕೆಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ. ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಕತ್ತನ್ನು ಕೊಯ್ದು ಕೊಲೆ ಮಾಡಲಾಗಿದೆ. ಹೆಚ್ಚಿನ ವಿವರ ಮರಣೋತ್ತರ ಪರೀಕ್ಷೆಯ ನಂತರ ಬರಬೇಕಿದೆ.

ಕೊಪ್ಪ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net