

ಬೆಳಗಾವಿ: ಕಬ್ಬಿಗೆ 3500ರೂ. ಬೆಂಬಲ ಬೆಲೆಗೆ ಆಗ್ರಹಿಸಿ ನಡೆದಿರುವ ರೈತರ ಹೋರಾಟಕ್ಕೆ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.
ಕರುನಾಡ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ನಗರದ ಚನ್ನಮ್ಮ ವೃತ್ತದಲ್ಲಿ ಕಬ್ಬು ಹಿಡಿದು ಪ್ರತಿಭಟಿಸಿದರು. ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರು ಕನ್ನಡ ಸಂಘಟನೆಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.
ಚನ್ನಮ್ಮ ವೃತ್ತದಲ್ಲಿಕಬ್ಬು ಹಿಡಿದು ಧರಣಿ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.