ವಿದ್ಯುತ್ ತಂತಿ ತಗುಲಿ ಕಬ್ಬಿನ ಬೆಳೆ ನಾಶ

29-GPT-3
ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ನಾಗಭೂಷಣ ಎಂಬುವರ ಕಬ್ಬಿನ ಜಮೀನಿಗೆ ಬಿದ್ದ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು.
Published on

ಗುಂಡ್ಲುಪೇಟೆ: ತಾಲೂಕಿನ ಲಕ್ಕೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಬ್ಬಿನ ಬೆಳೆ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ನಾಗಭೂಷಣ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯ ಮೇಲೆ ಕೆಳ ಮಟ್ಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಜಮೀನಿಗೆ ಬೆಂಕಿಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸುಮಾರು ಒಂದು ಗಂಟೆಗೂ ಹೆಚ್ಚಿನ ಕಾಲ ಕಾರ್ಯಾಚರಣೆ ನಡೆಸಿದ ನಂತರ ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರಲ್ಲಿ ಬೆಂಕಿ ಎಲ್ಲ ಕಡೆಗೂ ವ್ಯಾಪಿಸಿದ್ದರಿಂದ ಸಂಪೂರ್ಣ ಬೆಳೆ ಭಸ್ಮವಾಗಿದೆ. ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net