ವಿದ್ಯುತ್ ತಗುಲಿ ಕಬ್ಬು ನಾಶ

28kgl-2
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಅಗ್ರಹಾರದ ಜಮೀನಿನೊಂದರ ಕಬ್ಬು ಸುಟ್ಟು ನಾಶವಾಗಿರುವುದು.
Published on

ಕೊಳ್ಳೇಗಾಲ : ತಾಲೂಕಿನ ಸತ್ತೇಗಾಲ ಅಗ್ರಹಾರದ ಜಮೀನೊಂದರ ಮೇಲೆ ಹಾದು ಹೋಗಿದ್ದ ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ.ಗ್ರಾಮದ ನಿವಾಸಿ ಹಾಗೂ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಘು ಅವರ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ರಘು ಅವರು ಐದು ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಬುಧವಾರ ಜಮೀನಿನ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿಗಳ ತಿಕ್ಕಾಟದಿಂದ ಬಂದ ಬೆಂಕಿಯ ಕಿಡಿ ಕಬ್ಬಿನ ಬೆಳೆ ಮೇಲೆ ಬಿದ್ದು, ಒಂದೂವರೆ ಎಕರೆಯಷ್ಟು ಕಬ್ಬು ಸುಟ್ಟು ಕರಕಲಾಗಿದೆ.ಬೆಂಕಿ ಕಂಡ ಗ್ರಾಮಸ್ಥರು ನಂದಿಸಲು ಪ್ರಯತ್ನಿಸಿದರೂ ಹೆಚ್ಚಿನ ಹಾನಿಯನ್ನು ತಡೆಯಲು ಸಾಧ್ಯವಾಗಿಲ್ಲ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಕಷ್ಟಪಟ್ಟು ಬೆಳೆದಿದ್ದ ಕಬ್ಬು ಕೈ ಸೇರುವಷ್ಟರಲ್ಲಿ ಬೆಂಕಿ ಕೆನ್ನಾಲಗೆಗೆ ಸುಟ್ಟು ಹೋಗಿದ್ದು ಅಪಾರ ಪ್ರಮಾಣ ಕಬ್ಬು ನಾಶವಾಗಿದೆ. ವಿದ್ಯುತ್ ಕಂಬಗಳು ಶಿಥಿಲಗೊಂಡು ತಂತಿಗಳು ಜೋತು ಬಿದ್ದು ರೈತರು ಬೆಳೆದ ಬೆಳೆಗಳು ನಾಶವಾದರೂ ಯಾವುದೇ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net