

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞದ ನಿಮಿತ್ತ ನಿತ್ಯವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮುಂದುವರಿದಿದ್ದು, ಏ.22ರಂದು ಸಂಜೆ 6ರಿಂದ ರಾತ್ರಿ 8ರ ವರೆಗೆ ರಾಜಾಂಗಣದಲ್ಲಿ ಕೃಷ್ಣಂ ವಂದೇ ಜಗದ್ಗುರುಂ ಎಂಬ ಸಂಗೀತ ಕಛೇರಿ ಆಯೋಜಿಸಲಾಗಿದೆ.
ಖ್ಯಾತ ಗಾಯಕರಾದ ರಾಯಚೂರಿನ ಶೇಷಗಿರಿ ದಾಸ, ಪುತ್ತೂರು ನರಸಿಂಹ ನಾಯಕ ಹಾಗೂ ಅನಂತ ಕುಲಕರ್ಣಿ ಅವರು ವಿವಿಧ ಭಕ್ತಿ ಗೀತೆಗಳನ್ನು ಹಾಡಲಿದ್ದಾರೆ.
ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪಟ್ಟದ ಕಿರಿಯ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.