

ಕಡೂರು: ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪೂರಕ ಭವಿಷ್ಯ ರೂಪಿಸಿಕೊಳ್ಳಲು ಸುಜ್ಞಾನ ನಿಧಿ ಹೆಚ್ಚು ಸಹಕಾರಿ ಎಂದು 12 ಹರಿವಾಣದ ಗುಡಕಟ್ಟಿನ ಸಮಿತಿ ಅಧ್ಯಕ್ಷ ಭರತ್ ಕೆಂಪರಾಜ್ ಹೇಳಿದರು.
ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ದೇವಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ವೇತನದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿರೇಂದ್ರ ಹೆಗ್ಗಡೆ ಅವರು ಮಕ್ಕಳ ಉನ್ನತ ಶಿಕ್ಷಣದ ಭವಿಷ್ಯಕ್ಕೆ ಅನುಕೂಲವಾಗಲಿ ಎಂದು ರಾಜ್ಯಾದ್ಯಂತ ಸುಜ್ಞಾನ ನಿಧಿ ಯೋಜನೆಯಡಿ ಶಿಷ್ಯ ವೇತನ ನೀಡುತ್ತಿರುವುದು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಓದು ನಿಲ್ಲಿಸಬಾರದು ಎಂಬ ಮುಖ್ಯ ಉದ್ದೇಶದಿಂದ ಪ್ರತಿ ತಿಂಗಳು ಶಿಷ್ಯ ವೇತನ ನೀಡುವ ಮೂಲಕ ತಾಲೂಕಿನ 178 ವಿದ್ಯಾರ್ಥಿಗಳು ಅರ್ಹರಾಗಿರುವುದು ಹೆಮ್ಮೆಯ ಸಂಗತಿ ಎಂದರು.
ಪೂಜ್ಯ ಕಾವಂದರು ಸರ್ಕಾರವನ್ನು ಹೊರತುಪಡಿಸಿ ಪರ್ಯಾಯ ಸಂಸ್ಥೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಸದುಪಯೋಗವಾಗಬೇಕು ಎಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಿ ಯಶಸ್ವಿಯಾ
ಮಲ್ಲೇಶ್ವರ ಗ್ರಾಪಂ ಮಾಜಿ ಅಧ್ಯಕ್ಷೆ ಯಶೋಧ ಧರ್ಮರಾಜ್, ಪತ್ರಕರ್ತ ಎಚ್.ಆರ್. ದೇವರಾಜ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಭಾಗ್ಯ ಮತ್ತಿತರರಿದ್ದರು.