

ಉಡುಪಿ: ಹಿಂದೂ ಸಂಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯ ತನಿಖೆಯನ್ನು ಎನ್ ಐ ಎ ತನಿಖೆಗೆ ವರ್ಗಾಯಿಸಿದ ಕೇಂದ್ರ ಸರ್ಕಾರದ ಗೃಹ ಇಲಾಖೆ ನಿರ್ಧಾರ ಸ್ವಾಗತಾರ್ಹ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿ ಮತಾಂಧ ಶಕ್ತಿಗಳು ಅಮಾನುಷವಾಗಿ ಬಜ್ಪೆ ಪೇಟೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಮಾಡಿ ಕರಾವಳಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೇ ಸವಾಲು ಹಾಕಿದ್ದರು. ಈ ಪ್ರಕರಣವನ್ನು ಎನ್ ಐ ಎ ತನಿಖೆಗೆ ನೀಡುವಂತೆ ಸುಹಾಸ್ ಶೆಟ್ಟಿ ತಂದೆ ಮತ್ತು ತಾಯಿ ಮಾಡಿದ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದೆ. ತನಿಖೆಯ ಮೂಲಕ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪಾಲ್ಗೊಂಡ ಮತಾಂಧ ಶಕ್ತಿಗಳು, ಆರ್ಥಿಕ ಸಹಕಾರ ನೀಡಿರುವ ಕಾಣದ ಕೈಗಳು ಹಾಗೂ ಕರಾವಳಿ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ನಿಷೇಧಿತ ಮತೀಯ ಸಂಘಟನೆಗಳ ಕೈವಾಡ ಬಯಲಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.