ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌.ಐ‌.ಎ ಗೆ?

IMG-20250502-WA0039
Published on

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐ ಎ ವಹಿಸುವಂತೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಳಿ ಮನವಿ ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ. ಈ ಬಗ್ಗೆ ತುರ್ತು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆಯನ್ನು ಕೇಂದ್ರ ಗೃಹ ಖಾತೆ ಇಲಾಖೆ ನೀಡಿದೆ.

ಮಂಗಳೂರಿನ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಹತ್ಯೆಗೆ ವ್ಯಾಪಾಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷೀಕರಣವೂ ಇಲ್ಲ ಎಂದು ಸ್ಪಷ್ಟಿಕರಣ ನೀಡಿದ ಬೆನ್ನಲ್ಲೇ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐ‌ಎ ಗೆ ವಹಿಸುವಂತೆ ಹಿಂದೂ ಸಂಘಟನೆಗಳಿಂದ ಸರ್ಕಾರಕ್ಕೆ ಆಗ್ರಹಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net