ಸುಹಾಸ್‌ ಶೆಟ್ಟಿ ಅವರ ಹತ್ಯೆ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ!

Screenshot_2025-05-02-11-16-29-77_680d03679600f7af0b4c700c6b270fe7
Published on

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಹತ್ಯೆಗೆ ವ್ಯಾಪಾಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷೀಕರಣವೂ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ ಮತ್ತು ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net