ಶೀಘ್ರ ಅತಿಥಿ ಶಿಕ್ಷಕರ ನೇಮಕ

sulibele beo visit
Published on

ವಿಜಯವಾಣಿ ಸುದ್ದಿಜಾಲ ಸೂಲಿಬೆಲೆ
ಹೊಸಕೋಟೆ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಅವಶ್ಯ ಇರುವ ಶಿಕ್ಷಕರ ನೇಮಕವನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಬಿಇಒ ಪದ್ಮನಾಭ ಹೇಳಿದರು.
ಪಟ್ಟಣದ ಜನತಾ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆಭೇಟಿ ನೀಡಿ ಶಾಲೆಯ ಸೌಕರ್ಯ ಪರಿಶೀಲಿಸಿ ಶಿಕ್ಷಕರೊಂದಿಗೆ ಚರ್ಚಿಸಿ ಮಾತನಾಡಿದರು. ಜನತಾ ಕಾಲನಿ ಶಾಲೆಯಲ್ಲಿ ಇಬ್ಬರು ಶಿಕ್ಷಕರ ಕೊರತೆ ಇದೆ. ಶೀಘ್ರ ಗಣಿತ ವಿಷಯದ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಡುವುದಾಗಿ ತಿಳಿಸಿದರು.
ಮುಖ್ಯಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದೆ. ಅಲ್ಲಿಯವರೆಗೆ ಅವಶ್ಯವಿರುವ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಶ್ರೀನಿವಾಸಪ್ಪ ಮಾತನಾಡಿ, ಸೂಲಿಬೆಲೆ ಹೋಬಳಿಮಟ್ಟದ ಅನೇಕ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲು ಶೀಘ್ರವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಅವರನ್ನು ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಆ್ಯಂಡ್ ಕಲ್ಚರಲ್ ಟ್ರಸ್ಟ್‌ನಿಂದ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net