ವಿಜಯವಾಣಿ ಸುದ್ದಿಜಾಲ ಗುಡಿಬಂಡೆ
ತಾಲೂಕಿನ ಕರಿಗಾನತಮ್ಮನಹಳ್ಳಿಯ ವ್ಯಕ್ತಿಯೊಬ್ಬ ಕೌಟುಂಬಿಕ ಕಲಹಕ್ಕೆ ಬೇಸತ್ತು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗ್ರಾಮದ ನಿಖಿಲ್ ಕುಮಾರ್(25) ಆತ್ಮಹತ್ಯೆ ಮಾಡಿಕೊಂಡವ. ಸಾಲದ ವಿಚಾರವಾಗಿ ಮೂರು ದಿನಗಳ ಹಿಂದೆಯೇ ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದ ನಿಖಿಲ್ ಕುಮಾರ್ ಮನೆ ಬಿಟ್ಟು ಹೋಗಿದ್ದ. ಸಂಬಂಧಿಕರ ಮನೆಗೆ ಹೋಗಿರಬಹುದು ಎಂದು ಊಹಿಸಿ ನಿಖಿಲ್ ಪತ್ನಿ ಸುಮ್ಮನಾಗಿದ್ದರು. ಆದರೆ ಬುಧವಾರ ಬೆಳಗ್ಗೆ ಗ್ರಾಮದ ಹೊರವಲಯದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಶವ ಹೊರತೆಗೆದಿದ್ದು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪರೀಕ್ಷೆ ಬಳಿಕ ಕಟುಂಬಕ್ಕೆ ಹಸ್ತಾಂತರಿಸಲಾಯಿತು.