

ಗುರುಪುರ: ವಿವಾಹಿತರೊಬ್ಬರು ಮನೆಯ ಹಿಂಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ವಾಡಿಕೊಂಡ ಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಳವೂರು ಗ್ರಾಮದ ಅಗರಿ ಎಂಬಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ವಾಡಿಕೊಂಡಿರುವ ನಾರಾಯಣ ಭಂಡಾರಿ ಯಾನೆ ಕುಟ್ಟಿ(57) ಕೃಷಿಕರಾಗಿದ್ದರು. ಸ್ಥಳ ಮಹಜರು ನಡೆಸಿದ ಬಜ್ಪೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೋಳಿಅಂಕ ಪ್ರಿಯರಾಗಿದ್ದ ಅವರು ಕೆಲವು ಸಮಯದಿಂದ ಹಣಕಾಸು ಮತ್ತು ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.