ವಿಷಸೇವಿಸಿದ್ದಾತ ಚಿಕಿತ್ಸೆ ಫಲಿಸದೆ ಸಾವು

Death Case
Published on

ಕಡಬ: ಹೊಟ್ಟೆನೋವಿನಿಂದ ಬಳಲುತ್ತಿದ್ದಾತ ಮಾನಸಿಕವಾಗಿ ನೊಂದು ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಐತ್ತೂರಿನಲ್ಲಿ ನಡೆದಿದೆ.

ಐತ್ತೂರು ಗ್ರಾಪಂ ವ್ಯಾಪ್ತಿಯ ಬೆತ್ತೋಡಿ ನಿವಾಸಿ ಪರಮಶಿವಂ(65) ಮೃತಪಟ್ಟವರು. ಕೃಷಿ ಕೆಲಸ ಮಾಡಿಕೊಂಡಿದ್ದ ಅವರು ಇತ್ತೀಚೆಗೆ ಹೊಟ್ಟೆನೋವಿನಿಂದ ಬಳಲುತ್ತಿದ್ದು ಅ.12ರಂದು ಆಜನ ಎಂಬಲ್ಲಿರುವ ತೋಟದಲ್ಲಿ ಸಂಜೆ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು. ಮನೆ ಮಂದಿ ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದರು. ಆ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಚೇತರಿಸಿಕೊಂಡಿದ್ದರು. ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮನೆಗೆ ಕರೆದುಕೊಂಡು ಬರುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net