ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ

suicide
ಸಿದ್ದೀಕ್ ಅನ್ಸರ್
Published on

ಪುತ್ತೂರು ಗ್ರಾಮಾಂತರ: ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net