ಫೈನಾನ್ಸ್‌ಗಳ ಕಿರುಕುಳಕ್ಕೆ ಆತ್ಮಹತ್ಯೆ ಯತ್ನ

crime
Published on

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇಲ್ಲಿಯ ಕಮರಿಪೇಟೆಯ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಮೆಹಬೂಬ್ ಅಲಿ ಆತ್ಮಹತ್ಯೆಗೆ ಯತ್ನಿಸಿದವರು. ಇವರ ಪತ್ನಿ ಫರ್ನಿಚರ್ ವ್ಯವಹಾರಕ್ಕಾಗಿ ನವನಗರದ ಶ್ರೀಫಿನ್ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ 1.10 ಲಕ್ಷ ರೂ., ಕ್ರೆಡಿಟ್ ಅಕ್ಸೆಸ್ ಗ್ರಾಮೀಣ ಲಿಮಿಟೆಡ್ ಬಿಡನಾಳದಲ್ಲಿ 1.48 ಲಕ್ಷ ರೂ., ಉಣಕಲ್‌ನ ಇಕ್ವಿಟಾಸ್ ಫೈನಾನ್ಸ್ ಕಂಪನಿಯಲ್ಲಿ 1.10 ಲಕ್ಷ ರೂ. ಸಾಲ ಮಾಡಿದ್ದರು. ಪ್ರತಿ ವಾರ ಸಾಲ ಕಟ್ಟುವ ಒಪ್ಪಂದ ಮಾಡಿಕೊಂಡಿದ್ದರು. ಕಂತು ಕಟ್ಟುವುದು ವಿಳಂಬವಾದ ಹಿನ್ನೆಲೆಯಲ್ಲಿ ಕುಟುಂಬದವರಿಗೆ ಮಾನಸಿಕ, ದೈಹಿಕ ಕಿರುಕುಳ ಕೊಟ್ಟಿದ್ದರು. ಸಾರ್ವಜನಿಕವಾಗಿ ಮಹಿಳೆಯನ್ನು ಎಳೆದಾಡಿದ್ದಾರೆ. ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಮನನವೊಂದು ಮೆಹಬೂಬ ಅಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಕೆಎಂಸಿಆರ್‌ಐಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net