ವಿಷ ಕುಡಿದು ಮದ್ಯವ್ಯಸನಿ ಆತ್ಮಹತ್ಯೆ

Crime Logo
Published on

ಪಾಂಡವಪುರ: ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಮದ್ಯವ್ಯಸನಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮದ ನಿವಾಸಿ ಗುರುಮೂರ್ತಿ(35) ಸಾವಿಗೆ ಶರಣಾದ ವ್ಯಕ್ತಿ. ಮೃತನಿಗೆ ಪತ್ನಿ, ಪುತ್ರ ಇದ್ದಾರೆ. ಮದ್ಯ ವ್ಯಸನಿಯಾಗಿದ್ದ ಗುರುಮೂರ್ತಿ ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಶುಕ್ರವಾರ ರಾತ್ರಿ ಎಂದಿನಂತೆ ಕುಡಿದು ಬಂದು ಮನೆಯಲ್ಲಿ ರಂಪಾಟ ನಡೆಸಿದ್ದಾನೆ. ಮನೆಯವರೆಲ್ಲ ಮಲಗಿದ್ದ ಬಳಿಕ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಬಾಯಲ್ಲಿ ನೊರೆ ಬರುವುದನ್ನು ಗಮನಿಸಿ ಕುಟುಂಬಸ್ಥರು ನೋಡಿದಾಗ ವಿಷ ಸೇವಿಸಿ ಮೃತಪಟ್ಟಿರುವುದು ದೃಢಪಟ್ಟಿದೆ. ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net