ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ

Hanging
Published on

ಕಾರ್ಕಳ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೆಳ್ಮಣ್ ಗ್ರಾಮದ ಪೇರಲ್‌ಪಾದೆ ಎಂಬಲ್ಲಿ ನಡೆದಿದೆ. ನೋಯಲ್ ಮಾರ್ಟಿಸ್ (46) ಎಂಬುವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಎರಡು ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net