

ಪಡುಬಿದ್ರಿ: ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಾಪು ಉಳಿಯಾರಗೋಳಿಯ ರಮೇಶ್ (49) ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿಡಿದ್ದಾರೆ. ಅವರು ರಾತ್ರಿ ಊಟ ಮಾಡಿ ಮಲಗಿದ್ದರು. ರಾತ್ರಿ 1 ಗಂಟೆಗೆ ಪತ್ನಿ ಎದ್ದು ನೋಡಿದಾಗ ರಮೇಶ ಮಲಗಿಕೊಂಡಲ್ಲಿ ಇರದೇ ಇದ್ದು, ಹುಡುಕಾಡಿದಾಗ ಮನೆ ಬಳಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿದ್ದರು. ತಕ್ಷಣ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ರಮೇಶ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.