ಅನಾರೋಗ್ಯದಿಂದ ನೇಣುಬಿಗಿದು ಆತ್ಮಹತ್ಯೆ

Hanging
Published on

ಕಾರ್ಕಳ: ನೀರೆ ಗ್ರಾಮದಲ್ಲಿ ಅನಾರೋಗ್ಯ ಸಮಸ್ಯೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಶೋಕ (45) ನೇಣಿಗೆ ಶರಣಾದವರು. ಅವರು ಕಾಲಿನ ನರದ ಸಮಸ್ಯೆಯಿಂದ ಬಳಲುತ್ತಿದ್ದು, ಮದ್ಯ ಸೇವನೆ ಚಟ ಹೊಂದಿದ್ದರು. ಇದೇ ಕಾರಣವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net