ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Published on

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಅಶೋಕಪುರಂನ ಕುಮಾರ್ (29) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಮಾರ್ ಒಂದು ವರ್ಷದಿಂದ ಪಾರ್ಶ್ವ ವಾಯುವಿನಿಂದ ಬಳಲುತ್ತಿದ್ದು, ಚೇತರಿಗೆ ಕಂಡಿರಲಿಲ್ಲ ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಕಾಫಿ ಕುಡಿಯಲೆಂದು ಮನೆಯಿಂದ ಹೊರ ಹೋದವನು ಜಯನಗರ ಗೇಟ್ ಬಳಿ ರೈಲ್ವೆ ಹಳಿಯ ಮೇಲೆ ರೈಲಿಗೆ ತಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net