ವಿಷ ಸೇವಿಸಿ ಆತ್ಮಹತ್ಯೆ

28 mlv 1 ಶಿವನಾಗಮ್ಮ( 55)
Published on

ಮಳವಳ್ಳಿ: ತಾಲೂಕಿನ ಎಂ.ಬಸವನಪುರ ಗ್ರಾಮದಲ್ಲಿ ಸಾಲದಿಂದ ಬೇಸತ್ತು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗ್ರಾಮದ ಲೇ.ಶಿವಲಿಂಗಯ್ಯ ಅವರ ಪತ್ನಿ ಶಿವನಾಗಮ್ಮ (55) ಮೃತರು. ಶಿವನಾಗಮ್ಮ ಕೃಷಿಗಾಗಿ 4 ಲಕ್ಷ ರೂ.ಗಳಿಗೂ ಅಧಿಕ ಸಾಲ ಮಾಡಿದ್ದರು. ಕೃಷಿಯಿಂದ ನಷ್ಟ ಹೊಂದಿದ್ದ ಹಿನ್ನೆಲೆಯಲ್ಲಿ ಸಾಲ ತೀರಿಸಲು ದಾರಿ ಇಲ್ಲದೆ ಬುಧವಾರ ಮಧ್ಯಾಹ್ನ ಮನೆಯಲ್ಲೇ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು.
ವಿಷಯ ತಿಳಿದ ಅಕ್ಕಪಕ್ಕದ ನಿವಾಸಿಗಳು ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net