

ಉಪ್ಪಿನಂಗಡಿ: ಇಲ್ಲಿನ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್(30) ಎಂಬುವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೈದಿದ್ದಾರೆ. ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿಯಾಗಿದ್ದ ಅವರು ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ವೈಯಕ್ತಿಕ ಕಾರಣದಿಂದ ಮನನೊಂದು ಈ ಕೃತ್ಯಗೈದಿರುವುದಾಗಿ ದೂರಲಾಗಿದೆ. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.