ನೇಣು ಬಿಗಿದು ಯುವಕ ಆತ್ಮಹತ್ಯೆ

suicide
Published on

ಕಾಸರಗೋಡು: ಬದಿಯಡ್ಕ ಸಮೀಪದ ಕನ್ಯಪ್ಪಾಡಿ ಚೋಯಿಮೂಲೆ ನಿವಾಸಿ ಪ್ರವೀಣ್ ಕುಮಾರ್(32) ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ. ಸೋಮವಾರ ತಡರಾತ್ರಿ ಮಲಗುವ ಕೊಠಡಿಗೆ ತೆರಳಿದ್ದು, ಅಲ್ಪಹೊತ್ತಿನಲ್ಲಿ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಮನೆಯವರು ತೆರಳಿ ನೋಡಿದಾಗ ನೇಣಿನಲ್ಲಿ ನೇತಾಡುತ್ತಿರುವುದು ಕಂಡು ಬಂದಿತ್ತು. ತಕ್ಷಣ ಕೆಳಗಿಳಿಸಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಕೂಲಿ ಕಾರ್ಮಿಕರಾಗಿದ್ದರು. ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net