ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ

Death 28 June 20
Published on

ನಿಪ್ಪಾಣಿ: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣಾದ ಘಟನೆ ನಗರದ ಹಣಬರಗಲ್ಲಿಯಲ್ಲಿ ಸೋಮವಾರ ನಡೆದಿದೆ. ಸತೀಶ ಸಿದ್ಧಗೌಡ ಪಾಟೀಲ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸತೀಶನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೂಲಿ ಕಾರ್ಮಿಕನಾಗಿದ್ದ ಸತೀಶ, ಸಂಜೆ ತನ್ನ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವೇಶ್ವರ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net