ನೇಣುಬಿಗಿದು ಯುವಕ ಆತ್ಮಹತ್ಯೆ

Hanging
Published on

ಗಂಗೊಳ್ಳಿ: ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಅಸಿಸ್ಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಸದಾಶಿವ(33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವರ್ಕ್ ಫ್ರಮ್‌ಹೋಂ ಮಾಡುತ್ತಿದ್ದರು. ಶುಕ್ರವಾರ ಬೆಳಗ್ಗೆ ಮನೆ ಎದುರಿನ ಬಾವಿಯ ದಂಡೆ ಮೇಲೆ ಟಾರ್ಜ್ ಲೈಟ್ ಇರುವುದನ್ನು ಕಂಡು ಹತ್ತಿರ ಹೋಗಿ ನೋಡಿದಾಗ ಸದಾಶಿವ ಅವರು ಬಾವಿಯ ರಾಟೆ ಕಟ್ಟುವ ಕಬ್ಬಿಣದ ಅಡ್ಡಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net