

ಬೆಂಗಳೂರು: ವಿಲ್ಸನ್‌ಗಾರ್ಡನ್ ಮನೆಯೊಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸುಧಾಮನಗರದ ವರ್ಷಿಣಿ(೨೧) ಆತ್ಮಹತ್ಯೆ ಶರಣಾದವರು.
ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ ಡಿ.೩೦ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ರೂಮ್‌ಗೆ ತೆರಳಿ ನಿದ್ದೆಗೆ ಜಾರಿದ್ದಳು. ಡಿ.೩೧ರಂದು ಬೆಳಗ್ಗೆ ಎಷ್ಟು ಹೊತ್ತಾದರೂ ರೂಮ್‌ನಿಂದ ಹೊರಗೆ ಬಂದಿರಲಿಲ್ಲ. ಈ ವೇಳೆ ಪಾಲಕರು ರೂಮ್ ಬಾಗಿಲು ಬಡಿದು ಎಚ್ಚರಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಎಷ್ಟೇ ಪ್ರಯತ್ನಪಟ್ಟರೂ ರೂಮ್ ಒಳಗಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಬಾಗಿಲು ಲಾಕ್ ಮುರಿದು ಒಳಗೆ ಹೋಗಿ ನೋಡಿದಾಗ, ವರ್ಷಿಣಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಪಾಲಕರು ನೀಡಿದ ದೂರಿನ ದೂರಿನ ಮೇರೆಗೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ವರ್ಷಿಣಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಪಾಲಕರು ಹೇಳುವ ಪ್ರಕಾರ, ವರ್ಷಿಣಿ ಫೋಟೋಗ್ರಾಫಿ ಕೋರ್ಸ್ ಮಾಡಿದ್ದಾಳೆ. ಡಿ.೩೧ ರಂದು ನಗರದ ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಫೋಟೋ ಶೂಟ್ ನಡೆಸಲು ಪಾಲಕರ ಅನುಮತಿ ಕೇಳಿದ್ದಾಳೆ. ಇದಕ್ಕೆ ಅವರು ನಿರಾಕರಿಸಿದ್ದಾರೆ. ಈ ವಿಚಾರದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.