ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ

web2
ಮೂಡಲಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಈಚೆಗೆ ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ವಾರಸುದಾರರಿಗೆ 5 ಲಕ್ಷ ರೂ.ಪರಿಹಾರಧನ ಪತ್ರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ವಿತರಿಸಿದರು. ಶಿವಾನಂದ ಬಬಲಿ, ಎ.ಜಿ.ಚಿನ್ನನ್ನವರ ಇತರರಿದ್ದರು.
Published on

ಮೂಡಲಗಿ: ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಈಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ವಾರಸುದಾರರಿಗೆ ಭಾನುವಾರ 5 ಲಕ್ಷ ರೂ. ಪರಿಹಾರಧನ ಪತ್ರ ವಿತರಿಸಿ ಮಾತನಾಡಿದರು.
ಮನೆಯ ಯಜಮಾನ ಆತ್ಮಹತ್ಯೆ ಮಾಡಿಕೊಂಡಲ್ಲಿ ಇಡೀ ಕುಟುಂಬ ಬೀದಿಗೆ ಬೀಳುತ್ತದೆ. ಆದ್ದರಿಂದ ರೈತರು ಎಷ್ಟೇ ಸಾಲ ಮಾಡಿದರೂ ಅವುಗಳಿಗೆ ಹೆದರದೆ ಧೈರ್ಯದಿಂದ ಎದುರಿಸಬೇಕೇ ಹೊರತು ಆತ್ಮಹತ್ಯೆ ಪರಿಹಾರವಲ್ಲ ಎಂದು ತಿಳಿಸಿದರು.

ಆತ್ಮಹತ್ಯೆಗೆ ಶರಣಾದ ದುರದುಂಡಿ ಗ್ರಾಮದ ಯಲ್ಲಪ್ಪ ಮಾಳ್ಯಾಗೋಳ, ಶಿವಾಪುರ (ಹ) ಗ್ರಾಮದ ದುಂಡಯ್ಯ ಹಿರೇಮಠ, ತುಕ್ಕಾನಟ್ಟಿ ಗ್ರಾಮದ ಸೋಮಪ್ಪ ಹುಲಕುಂದ ಮತ್ತು ಸಂಗನಕೇರಿ ಗ್ರಾಮದ ಹನಮಂತ ಉಪ್ಪಾರ ಅವರ ಕುಟುಂಬದ ವಾರಸುದಾರರಿಗೆ ತಲಾ 5 ಲಕ್ಷ ರೂ.ವಿತರಿಸಿದರು.

ತಹಸೀಲ್ದಾರ್ ಶಿವಾನಂದ ಬಬಲಿ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ.ನದ್ಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎ್.ಜಿ. ಚಿನ್ನನ್ನವರ, ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಶೈಲ ಬ್ಯಾಕೋಡ್, ಸಬ್ ಇನ್ಸ್‌ಪೆಕ್ಟರ್ ಎಚ್.ವೈ.ಬಾಲದಂಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net