ಸೂಕ್ತ ಅಭ್ಯರ್ಥಿ ಆರಿಸಿ ತರಲಿ

2
ಅಥಣಿ ತಾಪಂನಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಕಾರ್ಯಕ್ರಮದಲ್ಲಿ ಡಾ.ಎ.ಕೃಷ್ಣಾರಾಜ ಪ್ರತಿಜ್ಞಾವಿಧಿ ಬೋಧಿಸಿದರು. ಶಿವಾನಂದ ಕಲ್ಲಾಪುರ, ಬಿ.ವೈ.ಹೊಸಕೇರಿ, ಜಿ.ಎಸ್.ಮಠದ ಇತರರಿದ್ದರು.
Published on

ಅಥಣಿ: ಮತದಾರರು ಮತದಾನದ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮತದಾನದಿಂದ ಹೊರಗುಳಿಯಬಾರದು ಎಂದು ಜಿಪಂ ಯೋಜನಾ ನಿರ್ದೇಶಕ ಡಾ.ಎಂ.ಕೃಷ್ಣಾರಾಜ ಹೇಳಿದರು.

ಇಲ್ಲಿಯ ತಾಲೂಕು ಪಂಚಾಯಿತಿಯಲ್ಲಿ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆಯಲ್ಲಿ ಒಂದೊಂದು ಮತವೂ ಅತ್ಯಮೂಲ್ಯವಾಗಿದೆ. ಮತದಾನದ ಮಹತ್ವ ಕುರಿತು ಎಲ್ಲರಿಗೂ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಮತದಾನ ಜಾಗೃತಿ ಅಭಿಯಾನ ಸೆಲ್ಪಿ ಸ್ಟಾೃಂಡ್, ಸಹಿ ಅಭಿಯಾನ ಮತ್ತು ಮತದಾರರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಶಿವಾನಂದ ಕಲ್ಲಾಪುರ, ಗ್ರೇಡ್-2 ತಹಸೀಲ್ದಾರ್ ಬಿ.ವೈ.ಹೊಸಕೇರಿ, ಜಿ.ಎಸ್.ಮಠದ, ಎಸ್.ಎಂ.ಸ್ವಾಮಿ, ಪಿಡಿಒಗಳು, ತಾಪಂ ಸಿಬ್ಬಂದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net