ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ

sujnana
ಕಾಪುವಿನಲ್ಲಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಷ್ಯವೇತನ ಮಂಜೂರಾತಿ ಪತ್ರವಿತರಿಸಿದರು
Published on

ಪಡುಬಿದ್ರಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಕಾಪು ಮಹಾದೇವಿ ಪೌಢಶಾಲೆ ಸಭಾಂಗಣದಲ್ಲಿ ಭಾನುವಾರ 2024-25ನೇ ಸಾಲಿನ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಿದರು. ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಸದಸ್ಯ ಅನಿಲ್‌ಕುಮಾರ್, ಕಾಪು ಮಹಾದೇವಿ ಪೌಢಶಾಲೆ ಮುಖ್ಯ ಶಿಕ್ಷಕಿ ಜ್ಯೋತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಬಬಿತಾ ಅರಸ್, ಸಮಾಜಸೇವಕ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪತ್ರಕರ್ತ ಪುಂಡಲೀಕ ಮರಾಠೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಹಾಗೂ ಕಾಪು ತಾಲೂಕಿನ ಮೆಲ್ವೀಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net