ಶಿಕ್ಷಣದಿಂದ ಧರ್ಮ-ಸಂಸ್ಕೃತಿ ಉಳಿಸುವ ಕೆಲಸ : ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಭಿಮತ

New Project (19)
Published on

ಬೆಳ್ತಂಗಡಿ: ಪವಿತ್ರವಾದ ಹಿಂದು ಧರ್ಮ, ಸಂಸ್ಕೃತಿ ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಅಂತಹ ಕಾರ್ಯವನ್ನು ಶ್ರೀರಾಮ ಶಾಲೆ ಮಾಡುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ಗುರುವಾರ ಪ್ರವೇಶೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಆಡಳ್ತೆದಾರ ಶಿವಪ್ರಸಾದ ಅಜಿಲ, ಕಾರ್ಕಳ ಕಮಲಾಕ್ಷ ಕಾಮತ್, ಕೆ.ಎಸ್.ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ಶ್ರೀಪಾದ ಜಿ.ಮೆಹೆಂದಳೆ, ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಶಿರ್ಲಾಲು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧೀರ್ ಸುವರ್ಣ, ಶಾಲಾಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ನಾರಾವಿ, ಅಧ್ಯಕ್ಷ ರಾಜು ಪೂಜಾರಿ ಮತ್ತಿತರರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಮೇಶ್ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಮೋದ್ ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ನಿರೂಪಿಸಿದರು. ಶಿಕ್ಷಕಿ ಶಶಿಕಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net