

ವಿಜಯವಾಣಿ ಸುದ್ದಿಜಾಲ ಸುಳ್ಯ
ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ, ಶ್ರೀ ಶಾರದಾಂಬಾ ಉತ್ಸವ ಸಮಿತಿ ಸಹಯೋಗದಲ್ಲಿ 54ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಮೆರವಣಿಗೆಯ ಶೋಭಾಯಾತ್ರೆ ಬುಧವಾರ ಜರುಗಿತು.
ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದ ಮಂಟಪದಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀದೇವಿ ವಿಗ್ರಹ ಸಹಿತ ಶೋಭಾಯಾತ್ರೆಯಲ್ಲಿ ಸಹಸ್ರಾರು ಮಂದಿ ಭಾಗವಹಿಸಿದ್ದರು. ಶೋಭಾಯಾತ್ರೆಯು ಶ್ರೀ ಶಾರದಾಂಬಾ ಕಲಾ ವೇದಿಕೆಯಿಂದ ಹೊರಟು ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿತು.
ಪಯಸ್ವಿನಿ ನದಿಯಲ್ಲಿ ದೇವಿಯ ವಿಗ್ರಹವನ್ನು ಸ್ತಂಭನಗೊಳಿಸುವುದರೊಂದಿಗೆ ಸುಳ್ಯ ದಸರಾ ಕೊನೆಗೊಂಡಿತು. ದಸರಾ ಉತ್ಸವ ಸಮಿತಿಯ ಅಧ್ಯಕ್ಷೆ, ಶಾಸಕಿ ಭಾಗೀರಥಿ ಮುರುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಲೀಲಾಧರ ಡಿ.ವಿ., ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್, ಶ್ರೀ ಶಾರದಾಂಬ ಸೇವಾ ಸಮಿತಿ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಚಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್‌ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್, ಶ್ರೀ ಶಾರದಾಂಬ ಉತ್ಸವ ಸಮಿತಿ ಕೋಶಾಧಿಕಾರಿ ಗಣೇಶ್ ಆಳ್ವ, ದಸರಾ ಉತ್ಸವ ಸಮಿತಿ ಕೋಶಾಧಿಕಾರಿ ಸುನೀಲ್ ಕೇರ್ಪಳ, ರವಿಚಂದ್ರ ಕೊಡಿಯಾಲಬೈಲು ಸಹಿತ ಶಾರದಾಂಬ, ದಸರಾ ಸಮೂಹ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.