ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನ, ಸುಳ್ಯ ನಪಂ ಮಾಜಿ ಉಪಾಧ್ಯಕ್ಷೆ ಪತಿ ಗಂಭೀರ

Crime
Published on

ಸುಳ್ಯ: ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು(60)ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ ನಗರ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಅವರ ಪತಿ ಕೇಶವ ಪ್ರಭು ಸೋಮವಾರ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭ ಘಟನೆ ನಡೆದಿದೆ ಎನ್ನಲಾಗಿದೆ. ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಎಸ್‌ಐ ದಿಲೀಪ್ ಜಿ.ಆರ್ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net