ಗ್ಯಾರಂಟಿ ಯೋಜನೆಗಳ ಟೀಕೆ ಸಲ್ಲದು: ಕಾಂಗ್ರೆಸ್ ಜಿಲ್ಲಾ ಸಮಿತಿ ವಕ್ತಾರ ಎಸ್.ರಾಜೇಶ್

Published on

ಮೈಸೂರು: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ವಕ್ತಾರ ಎಸ್.ರಾಜೇಶ್ ದೂರಿದರು.
ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದರೆ ಸ್ವಾರ್ಥ ಸಾಧನೆಗಾಗಿ ಪದೇ ಪದೆ ಪಕ್ಷಾಂತರ ಮಾಡುತ್ತಿರುವ ವಿಶ್ವನಾಥ್ ಇದನ್ನು ಟೀಕಿಸುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ವಿಶ್ವನಾಥ್ ಅವರು ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರೂ ರಾಜ್ಯದ ಕಾವೇರಿ, ಮಹಾದಾಯಿ, ಮೇಕೆದಾಟು, ಬರ ಸಮಸ್ಯೆಗಳ ಬಗ್ಗೆ ಪ್ರಧಾನಿಯೊಡನೆ ಒಂದು ಬಾರಿಯೂ ಚರ್ಚಿಸಲಿಲ್ಲ. ಹೀಗಿದ್ದರೂ ರಾಜ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾದಿಯಲ್ಲೇ ಸಾಗಿರುವ ಸಿದ್ದರಾಮಯ್ಯ ಅವರನ್ನು ಟೀಕಿಸುವುದು ಸಮಂಜಸವಲ್ಲ ಎಂದು ರಾಜೇಶ್ ಟೀಕಿಸಿದರು.
ಮುಖಂಡರಾದ ರವಿ, ಪ್ರಮೋದ್, ಸಿದ್ದರಾಜು, ಎಸ್. ರಹೀಂ, ಖಮ್ರಾನ್ ಪಾಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net