

ಪ್ರಮುಖ ಮುಖ್ಯಾಂಶಗಳು
ಸೋಮವಾರ ಜಿ.ಪಂ. ಸಭಾಂಗಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅತಿಕ್ರಮಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಅತಿಕ್ರಮಣ ತೆರವುಗೊಳಿಸುವಂತೆ ಸೂಚಿಸಲಾಗಿದ್ದರೂ, ಅವರು ನಿರ್ಲಕ್ಷ್ಯ ಮಾಡಿದ್ದರು. ಪಾಲಿಕೆಯ ಮೂಲಕ ಜೆಸಿಬಿ, ಲಾರಿ ಬಳಸಿ ಅತಿಕ್ರಮಣ ತೆರವು ಕಾರ್ಯವನ್ನು ನಡೆಸಲಾಗುತ್ತಿದೆ. ತೆರವಿನ ಸಂಪೂರ್ಣ ಖರ್ಚು ವೆಚ್ಚವನ್ನು ಅತಿಕ್ರಮಣ ಮಾಡಿದವರಿಂದಲೇ ಭರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಸುಲ್ತಾನ್ ಬತ್ತೇರಿ ಹಾಗೂ ತಣ್ಣೀರುಬಾವಿ ನಡುವೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೇತುವೆಯ ಕೆಳಗಡೆ ಹಾಕಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಶೀಘ್ರವೇ ನಡೆಯಲಿದೆ. ಮಳೆಗಾಲದಲ್ಲಿ ನದಿ ನೀರಿನ ಹರಿವಿಗೆ ತೊಂದರೆಯಾಗದಂತೆ ಯಾವ ರೀತಿಯಲ್ಲಿ ಕ್ರಮ ವಹಿಸಬೇಕು ಎನ್ನುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಜುಲೈ 15ರ ಒಳಗೆ ಕಾಮಗಾರಿ ಪೂರ್ಣವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗುತ್ತಿದೆ. ರಾಜಕಾಲುವೆಗಳು ಸೇರಿದಂತೆ ಮಳೆ ನೀರು ಹರಿಯುವ ಚರಂಡಿಗಳ ಹೂಳೆತ್ತುವ ಕಾಮಗಾರಿ ನಡೆಸಲಾಗುತ್ತಿದ್ದು, ಈ ಕಾರ್ಯ ಮೇ 26ರೊಳಗೆ ಪೂರ್ಣಗೊಳ್ಳಲಿದೆ. ಈ ಹಿಂದೆ ಹೂಳೆತ್ತುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರಿನ ಮೇರೆಗೆ ಈ ಬಾರಿ ಸ್ಥಳೀಯ ಆಸಕ್ತ ಜನರ ಮೇಲ್ವಿಚಾರಣೆಯೊಂದಿಗೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆಗೆ ಎನ್‌ಎಚ್‌ಎಐನಿಂದ ಮಾಹಿತಿ ಪಡೆಯಲಾಗಿದೆ. ಪೊಲೀಸರ ನೆರವಿನೊಂದಿಗೆ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಡಿಸಿ ತಿಳಿಸಿದರು.
ನೇತ್ರಾವತಿ ಸೇತುವೆ ಸಮೀಪ ಸ್ಮಾರ್ಟ್ ಸಿಟಿ ಲಿ. ವತಿಯಿಂದ ನಿರ್ಮಾಣವಾಗುತ್ತಿರುವ ಜಲಾಭಿಮುಖ ಅಭಿವೃದ್ಧಿ ಯೋಜನೆ (ವಾಟರ್ ಫ್ರಂಟ್) ಕಾಮಗಾರಿ ಜೂನ್ 2ನೇ ವಾರದೊಳಗೆ ಪೂರ್ಣಗೊಳ್ಳಲಿದೆ. ಈ ವಾಯು ವಿಹಾರ ಪಥಕ್ಕೆ ಪ್ರವೇಶ ಹಾದಿ ಕಿರಿದಾಗಿದ್ದು, ಮಂಗಳೂರು ಕ್ಲಬ್ ಮೂಲಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಪ್ರವೇಶ ದಾರಿಗೆ ಮಾತುಕತೆ ನಡೆಸಿ ಕ್ರಮ ವಹಿಸಲಾಗುವುದು. ಸದ್ಯ ಕಾಮಗಾರಿ ನಡೆಯುತ್ತಿರುವ ಕಾರಣ ಉದ್ಯಾನವನದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.