ಸುಳ್ಯ ಹಬ್ಬ ಆಮಂತ್ರಣ ಪತ್ರಿಕೆ ಬಿಡುಗಡೆ

Sul_Invitation
Published on

ಸುಳ್ಯ: ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬವನ್ನು ಡಿ.25 ಮತ್ತು 26ರಂದು ಏರ್ಪಡಿಸಲಾಗುತ್ತಿದ್ದು, ಆಮಂತ್ರಣ ಪತ್ರ ಬಿಡುಗಡೆ ಬುಧವಾರ ನಡೆಯಿತು.

ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಸಮಿತಿಯ ಸ್ಥಾಪಕಾಧ್ಯಕ್ಷ ಎನ್.ಜಯಪ್ರಕಾಶ ರೈ ಮತ್ತು ಮಾಜಿ ಅಧ್ಯಕ್ಷೆ ಮೀನಾಕ್ಷಿ ಗೌಡ ಶುಭಹಾರೈಸಿದರು. ಸಮಿತಿ ಅಧ್ಯಕ್ಷ ಡಾ.ಜ್ಞಾನೇಶ್ ಎನ್.ಎ. ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಕೋಶಾಧಿಕಾರಿ ಎಂ.ಎನ್.ಶ್ರೀಕೃಷ್ಣ, ಉಪಸಮಿತಿ ಸಂಚಾಲಕರು, ಮಾಜಿ ಅಧ್ಯಕ್ಷರು, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net