ಸುಳ್ಯ ಗೌಡ ಮಹಿಳಾ ಘಟಕದ ವತಿಯಿಂದ ಸಾಧಕರಿಗೆ ಸನ್ಮಾನ

4
Published on

ಸುಳ್ಯ: ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಗುರುವಾರ ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕಿ ಸ್ವರ್ಣಕಲಾ ಎ.ಎಸ್. ಶುಭ ಹಾರೈಸಿದರು. ಗೌಡ ಮಹಿಳಾ ಘಟಕದ ಸ್ಥಾಪಕ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಸುಳ್ಯ ಮಹಿಳಾ ಘಟಕದ ನಿಕಟಪೂರ್ವಾಧ್ಯಕ್ಷೆ ಪುಷ್ಪಾವತಿ ಮಾಣಿಬೆಟ್ಟು ಅವರನ್ನು ಗೌರವಿಸಲಾಯಿತು.

ಮಹಿಳೆಯರಿಗಾಗಿ ವಿವಿಧ ಒಳಾಂಗಣ ಆಟ ಏರ್ಪಡಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಸಿ.ಸದಾನಂದ, ರೋಟರಿ ಕ್ಲಬ್ ಸುಳ್ಯ ಅಧ್ಯಕ್ಷೆ ಯೋಗಿತಾ ಗೋಪಿನಾಥ್, ತರುಣ ಘಟಕದ ಅಧ್ಯಕ್ಷ ಪ್ರೀತಂ ಕೇರ್ಪಳ, ಗೌಡ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ತಾಲೂಕು ಮಹಿಳಾ ಘಟಕದ ನಿರ್ದೇಶಕರಾದ ಎಂ.ಎಚ್.ಸುರೇಶ್ ಉಪಸ್ಥತರಿದ್ದರು.

ಜಯಶ್ರೀ ರಾಮಚಂದ್ರ ಪಲ್ಲತ್ತಡ್ಕ ಪ್ರಾರ್ಥಿಸಿದರು. ತಾಲೂಕು ಮಹಿಳಾ ಘಟಕದ ನಿರ್ದೇಶಕಿ ಭಾರತಿ ಪುರುಷೋತ್ತಮ ವಂದಿಸಿದರು. ಸವಿತಾ ಸಂದೇಶ್ ನಿರೂಪಿಸಿದರು. ನಗರ ಘಟಕದ ಅಧ್ಯಕ್ಷೆ ಹರ್ಷ ಕರುಣಾಕರ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net