ಅರಣ್ಯ ಕಂದಾಯ ಭೂಮಿ ಸಮಸ್ಯೆ ಪರಿಹಾರಕ್ಕೆ ಸರ್ವೇ: ಸಚಿವ ದಿನೇಶ್ ಗುಂಡೂರಾವ್ ಭರವಸೆ

New Project (3)
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಹಾಗೂ ಗೊಂದಲಗಳನ್ನು ಪರಿಹರಿಸಲು ಜಂಟಿ ಸರ್ವೇ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುಳ್ಯ ನಪಂನಲ್ಲಿ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಅಕ್ರಮ - ಸಕ್ರಮ ಕಡತ, 94ಸಿ ಕಡತ ವಿಲೇವಾರಿ ಆಗುತ್ತಿಲ್ಲ. 9/11 ಕಾನೂನು ಸರಳೀಕರಣ ಮಾಡಬೇಕು. ಅಡಕೆ ಹಳದಿ ರೋಗದಿಂದ ಕೃಷಿ ಹಾನಿ ಸಂಭವಿಸಿದ ಕೃಷಿಕರಿಗೆ ಪರಿಹಾರಕ್ಕೆ ಪ್ರತ್ಯೇಕ ಪ್ಯಾಕೇಜ್ ನೀಡಬೇಕು. ರಸ್ತೆ ಅಭಿವೃದ್ಧಿಗೆ ಅಂಬೇಡ್ಕರ್ ಭವನ ಪೂರ್ಣಗೊಳಿಸಲು ಅನುದಾನ ನೀಡಬೇಕು ಎಂದರು.

ನಪಂ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫಾ ಮಾತನಾಡಿದರು. ಕರ್ನಾಟಕ ಅರೆಭಾಷೆ-ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್, ಡಿಸಿಎಫ್ ಅಂಥೋನಿ ಮರಿಯಪ್ಪ, ತಹಸೀಲ್ದಾರ್ ಮಂಜುಳಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಮುಖಂಡರಾದ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್ ತೆಕ್ಕಿಲ್, ಜಿ.ಕೃಷ್ಣಪ್ಪ, ಪಿ.ಸಿ.ಜಯರಾಮ, ರಾಧಾಕೃಷ್ಣ ಬೊಳ್ಳೂರು, ನಿತ್ಯಾನಂದ ಮುಂಡೋಡಿ, ಪಿ.ಎಸ್.ಗಂಗಾಧರ, ಗೀತಾ ಕೋಲ್ಚಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಪಂ ಉಪಾಧ್ಯಕ್ಷ ಬುದ್ಧ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಸದಸ್ಯರಾದ ಎಂ.ವೆಂಕಪ್ಪ ಗೌಡ, ರಾಜು ಪಂಡಿತ್, ಡೇವಿಡ್ ಧೀರಾ ಕ್ರಾಸ್ತ, ಕೆ.ಎಸ್.ಉಮ್ಮರ್, ಶೀಲಾ ಅರುಣ ಕುರುಂಜಿ, ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ, ರಿಯಾಜ್ ಕಟ್ಟೆಕ್ಕಾರ್, ಭಾಸ್ಕರ ಪೂಜಾರಿ, ನಗರ ಯೋಜನಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ್ ಉಪಸ್ಥಿತರಿದ್ದರು. ನಪಂ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ವಂದಿಸಿದರು.

ಕಂದಾಯ ಇಲಾಖೆ ಜನರಿಗೆ ಶ್ರೀ ಸ್ಪಂದನೆ ಮಾಡಬೇಕು. ಬಡವರ ಕೆಲಸವನ್ನು ಆದ್ಯತೆ ಮೇರೆಗೆ ಮಾಡಬೇಕು. ಅನವಶ್ಯ ವಿಳಂಬ ಮಾಡಬಾರದು. ಅಕ್ರಮ ಸಕ್ರಮ, 94ಸಿ ಕಡತ 11/9ನ್ನು ಶ್ರೀ ಮಾಡಬೇಕು. ಸರ್ಕಾರಕ್ಕೆ ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯ ಇಲ್ಲ. ದಿನೇಶ್ ಗುಂಡೂರಾವ್ ಜಿಲ್ಲಾ ಉಸ್ತುವಾರಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net