

ಹುಬ್ಬಳ್ಳಿ:ಹು-ಧಾ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸುಮಿತ್ರಾ ಗುಂಜಾಳ ಅವಿರೋಧವಾಗಿ ಆಯ್ಕೆಯಾದರು.
ಮೇಯರ್ ವೀಣಾ ಬರದ್ವಾಡ ಅಧ್ಯಕ್ಷತೆಯಲ್ಲಿ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪ ಮೇಯರ್ ಸತೀಶ ಹಾನಗಲ್, ಸಭಾ ನಾಯಕ ಶಿವು ಹಿರೇಮಠ, ಸೀಮಾ ಮೊಗಲಿಶೆಟ್ಟರ್, ಇತರರು ಇದ್ದರು.
ತಾಂತ್ರಿಕ ಕಾರಣದಿಂದ ಲೆಕ್ಕಗಳ ಸ್ಥಾಯಿ ಸಮಿತಿಯ ಓರ್ವ ಸದಸ್ಯರ ಆಯ್ಕೆ ವಿಳಂಬವಾಗಿದ್ದರಿಂದ ಅಧ್ಯಕ್ಷರ ಆಯ್ಕೆ ನಡೆದಿರಲಿಲ್ಲ. ಹು-ಧಾ ಮಹಾನಗರ ಪಾಲಿಕೆಯ ಮೂರು ಸ್ಥಾಯಿ ಸಮಿತಿಗಳ ಅಧ್ಯಕ್ಷ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ 2 ತಿಂಗಳ ಹಿಂದೆಯೇ ನಡೆದಿತ್ತು. ಲೆಕ್ಕಗಳ ಸ್ಥಾಯಿ ಸಮಿತಿಯ ಓರ್ವ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಕಳೆದ ವಾರ ಚುನಾವಣೆ ನಡೆದಿತ್ತು.
ಸುಮಿತ್ರಾ ಗುಂಜಾಳ ಆಯ್ಕೆಯಿಂದ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನದಲ್ಲಿ ಹು-ಧಾ ಪೂರ್ವ ವಿಧಾನಸಭೆ ಕ್ಷೇತ್ರಕ್ಕೆ ಪ್ರಾತಿನಿಧ್ಯ ಸಿಕ್ಕಂತಾಗಿದೆ. ಸುಮಿತ್ರಾ ಅವರು ಪಾಲಿಕೆಯ 72ನೇ ವಾರ್ಡ್ನ ಸದಸ್ಯೆ. ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದು, ಎಲ್ಲ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ.