

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಬಾಲಭವನದಿಂದ 5ರಿಂದ 16 ವರ್ಷದೊಳಗಿನ ಮಕ್ಕಳಿಗೆ 15 ದಿನಗಳ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹಗೀತೆ, ಕಸದಿಂದ ರಸ, ಯೋಗ, ಕರಾಟೆ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಬೆಳಗ್ಗೆ 9ರಿಂದ ಮದ್ಯಾಹ್ನ 1ರವರೆಗೆ ಶಿಬಿರ ನಡೆಯಲಿದ್ದು, ಆಸಕ್ತ ಮಕ್ಕಳು ಮೇ 14ರೊಳಗೆ ಜಿಲ್ಲಾ ಬಾಲಭವನ ಕಚೇರಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.